ಬೆಂಗಳೂರು : ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರಕಿದೆ. ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ (ITBP Recruitment 2026) ಖಾಲಿ ಇರುವ 282 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ (ITBP)
ಒಟ್ಟು ಹುದ್ದೆಗಳು: 282
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 8
5 ಸೂಪರ್ ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ (ಸೆಕೆಂಡ್ ಇನ್ ಕಮಾಂಡ್), 162 ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ (ಡೆಪ್ಯುಟಿ ಕಮಾಂಡಂಟ್) ಹಾಗೂ 115 ಮೆಡಿಕಲ್ ಆಫೀಸರ್ (ಅಸಿಸ್ಟಂಟ್ ಕಮಾಂಡಂಟ್) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಜನರಲ್, ಒಬಿಸಿ ಸಮುದಾಯದವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.09 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ itbpolice.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ



















