ಬೆಂಗಳೂರು: ಸ್ಟೆನೋಗ್ರಾಫರ್ ಹುದ್ದೆಗಳಿಗಾಗಿ ಪ್ರಯತ್ನ ನಡೆಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬೆಂಗಳೂರು ಗ್ರಾಮೀಣ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 21 ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ (Bengaluru Rural District Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ನ್ಯಾಯಾಂಗ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಬೆಂಗಳೂರು ಗ್ರಾಮೀಣ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 15
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ bengalururural.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















