ಬೆಳಗಾವಿ : ಮಂಗಗಳ ಕಾಟಕ್ಕೆ ಗ್ರಾಮಸ್ಥರು ಹೈರಾಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಗುಂಪು ಗುಂಪಾಗಿ ಓಡಾಡುತ್ತಿರುವ ಮಂಗಗಳು ಜಮೀನುಗಳಿಗೆ ನುಗ್ಗಿ ಬೆಳೆಗಳಿಗೆ ಹಾನಿ ಮಾಡುತ್ತಿವೆ. ಅಲ್ಲದೆ, ಮನೆಗಳ ಮೇಲ್ಚಾವಣಿ ಏರಿ ಓಡಾಡುತ್ತಿರುವುದರಿಂದ ಮನೆಯ ಹಂಚುಗಳು ಒಡೆದು ಹೋಗುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಮಂಗಗಳ ಹಾವಳಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬೆಳೆಗಳಿಗೆ ಹಾನಿಯಾಗುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.
ಮಂಗಗಳ ಕಾಟದಿಂದ ಗ್ರಾಮಸ್ಥರು ಹಲವು ದಿನಗಳಿಂದ ತೊಂದರೆ ಅನುಭವಿಸುತ್ತಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಮಂಗಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!



















