ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಸಹಕಾರ ನೀಡುವ ಉದ್ದೇಶದಿಂದ, ಎಚ್ ಡಿಎಫ್ ಸಿ ಬ್ಯಾಂಕ್ ತನ್ನ ಪ್ರತಿಷ್ಠಿತ ‘ಪರಿವರ್ತನ್ ಇಸಿಎಸ್ಎಸ್’ (ECSS – Educational Crisis Scholarship Support) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಣಕಾಸು ನೆರವು ಪಡೆಯಬಹುದು.
ಯಾರು ಅರ್ಜಿ ಸಲ್ಲಿಸಬಹುದು?
1ರಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವವರು, ಡಿಪ್ಲೋಮಾ, ಐಟಿಐ, ಪಾಲಿಟೆಕ್ನಿಕ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಳೆದ ಪರೀಕ್ಷೆಯಲ್ಲಿ ಶೇ.55ರಷ್ಟು ಅಂಕ ಪಡೆದಿರಬೇಕು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ ಇರಬೇಕು ಎಂದು ತಿಳಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಂತಕ್ಕೆ ಅನುಗುಣವಾಗಿ 75 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿವೇತನವನ್ನು ಪಡೆಯಬಹುದು. ವಿದ್ಯಾರ್ಥಿಗಳು ಈಗ ಶಾಲಾ ಅಥವಾ ಕಾಲೇಜುಗಳಲ್ಲಿ ಓದುತ್ತಿರಬೇಕು. ಕುಟುಂಬದ ಆರ್ಥಿಕ ಪರಿಸ್ಥಿತಿಯೇ ವಿದ್ಯಾರ್ಥಿವೇತನ ನೀಡಲು ಆದ್ಯತೆಯ ವಿಷಯವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳಿಗೆ ಸೂಚನೆ:
ಆಸಕ್ತರು ಈ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆ, ಅರ್ಹತೆಯ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದ ಬಗ್ಗೆ ತಿಳಿದುಕೊಳ್ಳಲು Buddy4Study ಅಧಿಕೃತ ವೆಬ್ ಸೈಟ್ ಗೆ (https://www.buddy4study.com/page/hdfc-bank-parivartans-ecss-programme) ಭೇಟಿ ನೀಡಬಹುದು.
ಇದನ್ನೂ ಓದಿ : ಕೇಂದ್ರ ಸರ್ಕಾರದ NALನಲ್ಲಿ 6 ಹುದ್ದೆಗಳ ನೇಮಕಾತಿ : 56 ಸಾವಿರ ರೂ. ಸ್ಯಾಲರಿ



















