ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಖಾಲಿ ಇರುವ 282 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ITBP CAPF Medical Officer Recruitment 2026) ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ
ಒಟ್ಟು ಹುದ್ದೆಗಳು: 282
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 8
ಉದ್ಯೋಗ ಸ್ಥಳ: ದೇಶಾದ್ಯಂತ
ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ ಹಾಗೂ ಸೂಪರ್ ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಿಎಪಿಎಫ್, ಬಿಎಸ್ಎಫ್, ಐಟಿಬಿಪಿ, ಅಸ್ಸಾಂ ರೈಫಲ್ಸ್ ವಿಭಾಗಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ವಯಸ್ಸಿನ ಮಿತಿ ಎಷ್ಟು?
ಅರ್ಜಿ ಸಲ್ಲಿಸುವವರಿಗೆ 50 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು www.recruitment.itbpolice.nic.in ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ. ಜನರಲ್, ಒಬಿಸಿಯವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ : ಕಾಮೆಂಟರಿ ಬಾಕ್ಸ್ ಹೈಡ್ರಾಮಾ : ಲೈವ್‌ನಲ್ಲೇ ವಾಗ್ದಾಳಿಗಿಳಿದು ಮುಜುಗರಕ್ಕೀಡಾದ ಮಂಜ್ರೇಕರ್, ಮುರಳಿ ಕಾರ್ತಿಕ್!



















