ಚಿತ್ರದುರ್ಗ : ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ ಬಸ್ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಐಲ್ಯಾಂಡ್ ಹೆಸರಿನ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿತ್ತು. ಬಸ್‌ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್‌ನ್ನು ಮೇಲೆತ್ತಿದ್ದಾರೆ.
ಇದನ್ನೂ ಓದಿ : ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!



















