ಬೆಂಗಳೂರು : ನೀವೇನಾದರೂ ಐಟಿಐ ಕೋರ್ಸ್ ಮುಗಿಸಿ, ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಿಇಎಂಎಲ್ ಲಿಮಿಟೆಡ್ (BEML Apprentice Recruitment 2026) ಖಾಲಿ ಇರುವ 1,346 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬಿಇಎಂಎಲ್ ಲಿಮಿಟೆಡ್
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 1,346
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 8
ಕರ್ನಾಟಕದ ಬೆಂಗಳೂರು, ಮೈಸೂರು, ಕೆಜಿಎಫ್ ಹಾಗೂ ಕೇರಳದ ಪಾಲಕ್ಕಾಡ್ ನಲ್ಲಿ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಡಿಪ್ಲೋಮಾ, ಬಿ.ಇ, ಬಿ.ಟೆಕ್, ಡಿಗ್ರಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
18 ವರ್ಷ ದಾಟಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://recruitment.bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!



















