ಉಡುಪಿ : ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ 22 ವರ್ಷದ ನಮೃತಾ ದೇವಾಡಿಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು.
ಯಾವುದೋ ಕಾರಣಕ್ಕೆ ಮನನೊಂದು ನಮೃತಾ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ನಮೃತಾ ಮೃತಪಟ್ಟಿದ್ದಾರೆ.
ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ


















