ಸಾಗರ : ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಗರದ ನೆಲ್ಲಿಬೀಡು ವೃತ್ತದ ಬಳಿ ನಡೆದಿದೆ. ಮಳೂರು ಗ್ರಾಮದ ಅರ್ಚನಾ ಮೃತ ಯುವತಿ.
ಅರ್ಚನಾ ಅವರು ತಮ್ಮ ತಂದೆ ನೀಲಕುಮಾರ್ ಜೈನ್ ಅವರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಮರಳು ತುಂಬಿಕೊಂಡು ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಿಂದ ರಸ್ತೆಗೆ ಬಿದ್ದ ಅರ್ಚನಾ ಅವರ ತಲೆಯ ಮೇಲೆ ಟಿಪ್ಪರ್ನ ಬೃಹತ್ ಚಕ್ರ ಹರಿದಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಅರ್ಚನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಭೀಕರ ದೃಶ್ಯ ಕಂಡು ಸ್ಥಳೀಯರು ಕಂಗಾಲಾಗಿದ್ದು, ಘಟನೆ ಬಳಿಕ ಸ್ಥಳದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಕಾರ್ಗಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣ ಹಾಗೂ ಟಿಪ್ಪರ್ ಲಾರಿ ಚಾಲಕನ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ


















