ಬೆಂಗಳೂರು : ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲಿಯೇ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ದೇಶ ಸರ್ಕಾರಿ ಬ್ಯಾಂಕ್ ಗಳಿಗೆ ನೇಮಕಾತಿ ಮಾಡುವ ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Clerk Recruitment 2026) ಸಂಸ್ಥೆಯು 11,403 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)
ಹುದ್ದೆ ಹೆಸರು: ಕ್ಲರ್ಕ್ ಇತ್ಯಾದಿ
ಒಟ್ಟು ಹುದ್ದೆ: 11,403
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 28
ಕರ್ನಾಟಕದಲ್ಲಿಯೇ 1,414 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕರ್ನಾಟಕದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳಲು ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಇರಬೇಕು ಎಂಧು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ www.ibps.inವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಬೇಕು. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಭಾಷಾ ಪ್ರೌಢಿಮೆ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 64 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!



















