ಬೆಂಗಳೂರು : ನೀವೇನಾದರೂ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಚಿಕ್ಕಮಗಳೂರಿನಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ (DUDC Chikkamagaluru Recruitment 2026) ಖಾಲಿ ಇರುವ 29 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿಕ್ಕಮಗಳೂರು
ಒಟ್ಟು ಹುದ್ದೆಗಳು: 29
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 31
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಚಿಕ್ಕಮಗಳೂರು, ಕಡೂರು, ತರೀಕೆರೆ, ಮೂಡಿಗೆರೆ, ಶೃಂಗೇರಿ ಹಾಗೂ ಅಜ್ಜಂಪುರದಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ chikkamagaluru.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
District Urban Development Cell, District Collector’s Office, Chikkamagaluru.
ಇದನ್ನೂ ಓದಿ : ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್!



















