ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

August 27, 2026
Share on WhatsappShare on FacebookShare on Twitter

ಬೆಂಗಳೂರು : ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸುವ ನಿಟ್ಟಿನಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಅಭಿಯಾನಕ್ಕೆ ಗುರುವಾರ ಅಧಿಕೃತ ಚಾಲನೆ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ದೊಮ್ಮಲೂರು ವಾರ್ಡ್‌ನಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ನೋಟಿಸ್ ನೀಡಿದರೂ ಸ್ವಚ್ಛಗೊಳಿಸದೇ ಗಿಡಗಂಟಿಗಳು ಬೆಳೆದು ನಿಂತಿದ್ದ ಖಾಲಿ ನಿವೇಶನಕ್ಕೆ ಅಧಿಕಾರಿಗಳು ತೆರಳಿ, ಗೇಟ್ ಬೀಗ ತೆರೆಯಿಸಿ ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡರು. ಸುಮಾರು 100×100 ಅಡಿ ವಿಸ್ತೀರ್ಣದ ನಿವೇಶನದಲ್ಲಿ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ನಡೆಸಲಾಯಿತು.

400ಕ್ಕೂ ಹೆಚ್ಚು ನಿವೇಶನ ಮಾಲೀಕರಿಗೆ ನೋಟಿಸ್:

ನಗರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಈಗಾಗಲೇ 400ಕ್ಕೂ ಹೆಚ್ಚು ಖಾಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಮತ್ತು ಎಚ್ಚರಿಕೆಯ ಬಳಿಕವೂ ಸ್ವಚ್ಛತೆ ಮಾಡದ ನಿವೇಶನಗಳನ್ನು ಇನ್ನು ಮುಂದೆ ಜಿಬಿಎ ವತಿಯಿಂದಲೇ ಸ್ವಚ್ಛಗೊಳಿಸಲಾಗುತ್ತದೆ. ಸ್ವಚ್ಛತಾ ಕಾರ್ಯ ಹಾಗೂ ತ್ಯಾಜ್ಯ ಸಾಗಾಣಿಕೆಗೆ ಆಗುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ನಿವೇಶನ ಮಾಲೀಕರಿಂದಲೇ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಾಲೀಕರು ವೆಚ್ಚ ಪಾವತಿಸದಿದ್ದರೆ, ಮುಂದಿನ ವರ್ಷ ಕಟ್ಟಡ ತೆರಿಗೆ ವಸೂಲಿ ಸಂದರ್ಭದಲ್ಲಿ ಕ್ಲೀನಿಂಗ್ ಚಾರ್ಜ್ ಅನ್ನು ತೆರಿಗೆಗೆ ಸೇರಿಸಿ ವಸೂಲಿ ಮಾಡುವ ವ್ಯವಸ್ಥೆ ಮಾಡಲಾಗುತ್ತದೆ.

ನಿವೇಶನದ ಅಳತೆಗೆ ಅನುಗುಣವಾಗಿ ಶುಲ್ಕ

20×30 ಅಡಿ ನಿವೇಶನಕ್ಕೆ ಸ್ವಚ್ಛತಾ ವೆಚ್ಚ 6,700ರಿಂದ ಆರಂಭವಾಗಲಿದ್ದು, ತಡೆಗೋಡೆ ಇದ್ದಲ್ಲಿ ಹೆಚ್ಚುವರಿ ವೆಚ್ಚ ವಿಧಿಸಲಾಗುತ್ತದೆ. ತ್ಯಾಜ್ಯ ಸಾಗಾಣಿಕೆಗೆ ಪ್ರತ್ಯೇಕ ಶುಲ್ಕ ನಿಗದಿಯಾಗಿದೆ. ದೊಡ್ಡ ನಿವೇಶನಗಳಿಗೆ ವೆಚ್ಚವೂ ಹೆಚ್ಚಾಗಲಿದ್ದು, 50×80 ಅಡಿ ನಿವೇಶನದ ತ್ಯಾಜ್ಯ ಸಾಗಾಣಿಕೆಗೆ ಬರೋಬ್ಬರಿ 1.28 ಲಕ್ಷದವರೆಗೆ ವೆಚ್ಚ ನಿಗದಿಪಡಿಸಲಾಗಿದೆ. ಇದಕ್ಕಿಂತ ಹೆಚ್ಚಿನ ವಿಸ್ತೀರ್ಣದ ನಿವೇಶನಗಳಿಗೆ ಅಳತೆಗೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ.

“ಮೊದಲ ಬಾರಿ ದಂಡವಲ್ಲ, ಕೇವಲ ವೆಚ್ಚ ವಸೂಲಿ” – ಕೃಷ್ಣ ಬೈರೇಗೌಡ:

ಈ ಕುರಿತು ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಜುಲೈ 15ರಿಂದ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮನವಿ ಮಾಡಲಾಗಿತ್ತು ಎಂದು ತಿಳಿಸಿದರು. “ನಮ್ಮ ಮನವಿಗೆ ಸ್ಪಂದಿಸಿ ಸಾವಿರಾರು ಜನ ತಮ್ಮ ಸೈಟ್‌ಗಳನ್ನು ಸ್ವಚ್ಛಗೊಳಿಸಿದ್ದಾರೆ. ಅವರಿಗೆ ಧನ್ಯವಾದಗಳು. ಆದರೆ ಪದೇ ಪದೇ ಮನವಿ ಮಾಡಿದರೂ ಹಲವರು ಸ್ವಚ್ಛತೆ ಮಾಡಿಲ್ಲ. ಅವರಿಗೆ ಆಗಸ್ಟ್ 23ರವರೆಗೆ ಸಮಯ ನೀಡಿದ್ದೆವು. ಈಗ ನಾವು ಕೊಟ್ಟ ಮಾತಿನಂತೆ ಸ್ವಚ್ಛಗೊಳಿಸಲು ಮುಂದಾಗಿದ್ದೇವೆ” ಎಂದು ಹೇಳಿದರು.

ನಗರದಾದ್ಯಂತ ಈಗಾಗಲೇ ಸುಮಾರು 67 ಸಾವಿರ ಟನ್ ಡೆಬ್ರಿಸ್ ಮತ್ತು ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಬಿಬಿಎಂಪಿ/ಜಿಬಿಎ, ಬಿಡಿಎ, ಬೆಸ್ಕಾಂ ಮತ್ತು ಮೆಟ್ರೊ ಸೇರಿದಂತೆ ವಿವಿಧ ಸಂಸ್ಥೆಗಳು ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿರುವುದಾಗಿ ಹೇಳಿದರು. ಖಾಲಿ ನಿವೇಶನವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮಾಲೀಕರ ಕರ್ತವ್ಯವಾಗಿದ್ದು, ಇದಕ್ಕೆ ಜಿಬಿಎ ಕಾಯ್ದೆಯ ಸೆಕ್ಷನ್ 290 ಹಾಗೂ 274(1)ರಲ್ಲಿ ಕಾನೂನು ಅವಕಾಶವಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಮಾಲೀಕರಿಗೆ ಸಚಿವರ ಸಂದೇಶ

“ಸ್ವಚ್ಛತಾ ಶುಲ್ಕ ಜಾಸ್ತಿ ಎಂದು ಅನಿಸಿದರೆ ಜಿಬಿಎ ಸಿಬ್ಬಂದಿ ಬರುವ ಮುನ್ನವೇ ನಿಮ್ಮ ಸೈಟ್ ಅನ್ನು ನೀವೇ ಸ್ವಚ್ಛಗೊಳಿಸಿಕೊಳ್ಳಿ. ನಮಗೂ ತೊಂದರೆ ಬೇಡ, ನಿಮಗೂ ಹೆಚ್ಚುವರಿ ಖರ್ಚು ಬೇಡ. ಮೊದಲ ಬಾರಿಗೆ ದಂಡ ವಿಧಿಸುವುದಿಲ್ಲ, ಸ್ವಚ್ಛತೆಗೆ ಆಗಿರುವ ನಿಜವಾದ ವೆಚ್ಚವನ್ನು ಮಾತ್ರ ಪಡೆಯಲು ಸೂಚಿಸಿದ್ದೇನೆ” ಎಂದು ಕೃಷ್ಣ ಬೈರೇಗೌಡ ಹೇಳಿದರು.

ಒಟ್ಟಿನಲ್ಲಿ… ಖಾಲಿ ನಿವೇಶನಗಳಲ್ಲಿ ಗಿಡಗಂಟಿ ಬೆಳೆಸಿ ನಿರ್ಲಕ್ಷ್ಯ ಮಾಡುವ ಮಾಲೀಕರ ವಿರುದ್ಧ ಜಿಬಿಎ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಇಂದಿನಿಂದ ಸ್ವಚ್ಛತೆ ಮಾಡದಿದ್ದರೆ ಜಿಬಿಎಯೇ ಸೈಟ್ ಕ್ಲೀನ್ ಮಾಡಲಿದೆ; ಅದರ ಸಂಪೂರ್ಣ ವೆಚ್ಚ ಮಾಲೀಕರ ಜೇಬಿನಿಂದಲೇ ವಸೂಲಾಗಲಿದೆ. ನಗರ ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂಬ ಸಂದೇಶದೊಂದಿಗೆ ಐದು ನಗರ ಪಾಲಿಕೆಗಳಲ್ಲೂ ಅಭಿಯಾನ ಆರಂಭವಾಗಿದೆ.

ಇದನ್ನೂ ಓದಿ : ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

Tags: BBMPBengaluru Civic IssuesBengaluru NewsBengaluru PropertyCivic Body WarningGBA RulesGBA WarningKarnataka NewsKarnataka News beatKNBProperty OwnersSite OwnersVacant Sites
SendShareTweet
Previous Post

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

Next Post

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat