ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ಹುದ್ದೆಗಳ ನೇಮಕಾತಿಗೆ (Karnataka Social Welfare Department Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 140 ವಸತಿ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಸಮಾಜ ಕಲ್ಯಾಣ ಇಲಾಖೆ
ಒಟ್ಟು ಹುದ್ದೆಗಳು: 140
ಹುದ್ದೆಗಳ ಹೆಸರು: ವಸತಿ ಶಿಕ್ಷಕರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 18
ಕಲ್ಯಾಣ ಕರ್ನಾಟಕ ಭಾಗದಲ್ಲಿ 40 ಹಾಗೂ ಉಳಿದ ಭಾಗದಲ್ಲಿ 100 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಡಿ.ಎಡ್ ಹಾಗೂ ಬಿ.ಎಡ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 81,800 ರೂಪಾಯಿ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದ್ದರೆ, ವಿಶೇಷ ಚೇತನರಿಗೆ 250 ರೂ. ಇದೆ. ಉಳಿದವರಿಗೆ 750 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು cetonline.karnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!



















