ಬೆಂಗಳೂರು : ನೀವೇನಾದರೂ ಡಿಪ್ಲೋಮಾ ಕೋರ್ಸ್ ಮುಗಿಸಿ, ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫೀಸರ್ ಸೇಫ್ಟಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಆಫೀಸರ್ ಸೇಫ್ಟಿ
ಒಟ್ಟು ಹುದ್ದೆಗಳು: 5
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 2
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್



















