ಬೆಂಗಳೂರು : ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ವಿವಿಧ ಮ್ಯಾನೇಜ್ ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: ವಿವಿಧ
ಹುದ್ದೆ ಹೆಸರು: ಮ್ಯಾನೇಜ್ ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಸೆಪ್ಟೆಂಬರ್ 10
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Centre for Learning and Development, Bharat Electronics Limited, Jalahalli Bengaluru-560013.
ಇದನ್ನೂ ಓದಿ : ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ



















