ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 175 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೈಂಟಿಸ್ಟ್ ಹಾಗೂ ಎಂಜಿನಿಯರ್ ಹುದ್ದೆಗಳನ್ನು (ISRO Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 175
ಹುದ್ದೆಗಳ ಹೆಸರು: ಸೈಂಟಿಸ್ಟ್ ಹಾಗೂ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 16
ಉದ್ಯೋಗ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 56,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ isro.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಶ್ರೀಲಂಕಾದಲ್ಲಿ ಸಿರಾಜ್ ಮಂಕಾಗಿದ್ದೇಕೆ? ಕಳಪೆ ಪ್ರದರ್ಶನದ ಅಸಲಿ ಕಾರಣ ಬಿಚ್ಚಿಟ್ಟ ಆಕಾಶ್ ಚೋಪ್ರಾ



















