ಬೆಂಗಳೂರು : ಕೆಪಿಎಸ್‌ಸಿಯಲ್ಲಿ ನಡೆದಿರುವ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬೀದರ್ ಮೂಲದ ಬಸವರಾಜ್ ಕನ್ನಾಳೆ ಭಾಲ್ಕಿ ಎಂಬಾತನನ್ನು ಬಂಧಿಸಿದ್ದಾರೆ.
ಹಗರಣದಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ ಆರೋಪದ ಹಿನ್ನೆಲೆ, ದೆಹಲಿಯಲ್ಲಿದ್ದ ಬಸವರಾಜ್ ಕನ್ನಾಳೆಯನ್ನು ಸಿಐಡಿ ತಂಡ ಬಂಧಿಸಿ ಬೆಂಗಳೂರಿಗೆ ಕರೆತಂದಿದೆ. ಸದ್ಯ ಸಿಐಡಿ ಅಧಿಕಾರಿಗಳು ಬಸವರಾಜ್ ಕನ್ನಾಳೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬಸವರಾಜ್ ಕನ್ನಾಳೆ ಬಿಜೆಪಿ ನಾಯಕರ ಜತೆ ಗುರುತಿಸಿಕೊಂಡಿದ್ದು, ಹಲವು ಬಿಜೆಪಿ ನಾಯಕರೊಂದಿಗೆ ತೆಗೆಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪ್ರಕರಣದಲ್ಲಿ ಬಸವರಾಜ್ ಪಾತ್ರದ ಕುರಿತು ಸಿಐಡಿ ತನಿಖೆ ಮುಂದುವರಿಸಿದೆ.
ಇದನ್ನೂ ಓದಿ : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರತಿಕಾ ರಾವಲ್ ಪದಾರ್ಪಣೆ ; ಉತ್ತಮ ಆರಂಭ ಪಡೆದ್ರೂ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲ


















