ಬೆಂಗಳೂರು : ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿನಿಯರಿಗಾಗಿ ಮಹೀಂದ್ರಾ ಎಂಪವರ್ ಹರ್ ಸ್ಕಾಲರ್ಶಿಪ್ ಪ್ರೋಗ್ರಾಂ (Mahindra EmpowerHer Scholarship Program 2026-27) ಜಾರಿಗೆ ತಂದಿದೆ. ಆರ್ಥಿಕ ಸಮಸ್ಯೆಯಿಂದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿವೇತನ ಘೋಷಿಸಲಾಗಿದೆ.
ಪ್ರಮುಖ ಅರ್ಹತೆಗಳು
• ಹೆಣ್ಣುಮಕ್ಕಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
• 9ನೇ ತರಗತಿಯಿಂದ 12ನೇ ತರಗತಿವರೆಗೆ, ಸಾಮಾನ್ಯ ಪದವಿ (UG – B.A, B.Sc, B.Com ಇತ್ಯಾದಿ) ಹಾಗೂ ಸ್ನಾತಕೋತ್ತರ ಪದವಿ (PG – M.A, M.Sc, M.Com ಇತ್ಯಾದಿ) ಓದುತ್ತಿರುವ ವಿದ್ಯಾರ್ಥಿನಿಯರು ಅರ್ಹರು.
• ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಅಥವಾ ಸೆಮಿಟ್ಟರ್ ನಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ ಸೇರಿ 4 ಲಕ್ಷ ರೂ.ಗಿಂತ ಕಡಿಮೆ ಇರಬೇಕು.
ಸ್ಕಾಲರ್ ಶಿಪ್ ಮೊತ್ತವೆಷ್ಟು?
ಆಯ್ಕೆಯಾದ ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ನೇರವಾಗಿ ವಿದ್ಯಾರ್ಥಿನಿಯರ ಖಾತೆಗೆ ಹಣವನ್ನು ಜಮೆ ಮಾಡಲಾಗುತ್ತದೆ. ವಿದ್ಯಾರ್ಥಿನಿಯರು ಪಾಸ್ ಪೋರ್ಟ್ ಸೈಜಿನ ಫೋಟೊ, ಗುರುತಿನ ಚೀಟಿ, ಶೈಕ್ಷಣಿಕ ದಾಖಲೆ, ಹಿಂದಿನ ತರಗತಿ ಅಥವಾ ಸೆಮಿಸ್ಟರ್ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್ ವಿವರ ನೀಡಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನ.
ಅರ್ಜಿ ಸಲ್ಲಿಸುವ ವಿಧಾನ
- ಅಧಿಕೃತ Buddy4Study ವೆಬ್ ಸೈಟ್ https://www.buddy4study.com/page/mahindra-empowerher-scholarship-program ಗೆ ಭೇಟಿ ನೀಡಿ.
- ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಇಮೇಲ್ ಅಥವಾ ಮೊಬೈಲ್ ಸಂಖ್ಯೆಯ ಮೂಲಕ ಲಾಗಿನ್/ನೋಂದಣಿ ಮಾಡಿ.
- ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಅಪ್ ಲೋಡ್ ಮಾಡಿ.
- ಅಂತಿಮವಾಗಿ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ಇದನ್ನೂ ಓದಿ : ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?


















