ಬೆಂಗಳೂರು : ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ಸಂಗ್ರಹ ಮತ್ತು ಮಾರಾಟದ ವಿರುದ್ಧ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಉತ್ತರ ವ್ಯಾಪ್ತಿಯ ರಾಜನಕುಂಟೆ, ಮಾರಸಂದ್ರ ಸೇರಿದಂತೆ ವಿವಿಧೆಡೆ ಇರುವ ಗೋಡೌನ್‌ಗಳ ಮೇಲೆ ದಾಳಿ ನಡೆಸಲಾಗಿದೆ.
ಉತ್ತರ ವಿಭಾಗದ ಪಿಸಿಬಿ ಅಧಿಕಾರಿ ಸುರೇಶ್ ಸೂಚನೆಯಂತೆ ತಹಸೀಲ್ದಾರ್, ಪಿಡಿಒ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ. ಒಟ್ಟು 14 ಗೋಡೌನ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.
ದಾಳಿಯ ವೇಳೆ ಸುಮಾರು 700ರಿಂದ 800 ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಿಸಿದ ಗೋಡೌನ್‌ಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪಿಒಪಿ ಮೂರ್ತಿಗಳ ವಿರುದ್ಧ ಅಧಿಕಾರಿಗಳ ಕಟ್ಟುನಿಟ್ಟಿನ ಕ್ರಮ ಮುಂದುವರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ : 2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್ ಸಜ್ಜು!



















