ಬೆಂಗಳೂರು : ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ (BOI Recruitment 2026) ಖಾಲಿ ಇರುವ 205 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 205 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 205
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 25
ಉದ್ಯೋಗ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಎಂಸಿಎ, ಎಂ.ಎಸ್ಸಿ, ಎಲ್.ಎಲ್.ಬಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗರಿಷ್ಠ 42 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಜನರಲ್ ಹಾಗೂ ಒಬಿಸಿಯವರಿಗೆ 1,180 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿಯವರಿಗೆ 175 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಮತ್ತು ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಮೊದಲಿಗೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು bankofindia.bank.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ



















