ಬೆಂಗಳೂರು : ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲಿಯೇ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ದೇಶ ಸರ್ಕಾರಿ ಬ್ಯಾಂಕ್ ಗಳಿಗೆ ನೇಮಕಾತಿ ಮಾಡುವ ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Clerk Recruitment 2026) ಸಂಸ್ಥೆಯು ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)
ಹುದ್ದೆ ಹೆಸರು: ಆಫೀಸರ್ ಇತ್ಯಾದಿ
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 21
ಆಫೀಸ್ ಅಸಿಸ್ಟಂಟ್ ಹಾಗೂ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮೊದಲಿಗೆ ಆನ್ ಲೈನ್ ಮೂಲಕ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ಆನ್ ಲೈನ್ ಮುಖ್ಯ ಪರೀಕ್ಷೆ, ಸ್ಥಳೀಯ ಭಾಷಾ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಓದಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ibps.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು
ಇದನ್ನೂ ಓದಿ : ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!



















