ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಾಹಿತ್ಯ ಅಕಾಡೆಮಿಯಲ್ಲಿ (Sahitya Akademi Recruitment 2026) ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯುಟಿ ಸೆಕ್ರೆಟರಿ, ಅಸಿಸ್ಟಂಟ್ ಎಡಿಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಸಾಹಿತ್ಯ ಅಕಾಡೆಮಿ
ಒಟ್ಟು ಹುದ್ದೆಗಳು: 30
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 22
ಉದ್ಯೋಗ ಸ್ಥಳ: ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ
ಕರ್ನಾಟಕದ ಬೆಂಗಳೂರು, ಮಹಾರಾಷ್ಟ್ರದ ಮುಂಬೈ, ನವದೆಹಲಿ, ತಮಿಳುನಾಡಿನ ಚೆನ್ನೈ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ, ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದು.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ sahitya-akademi.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Secretary, Sahitya Akademi, Rabindra Bhavan, 35 Ferozeshah Road, New Delhi-110001
ಇದನ್ನೂ ಓದಿ : ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ



















