ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಪ್ರಯತ್ನಸಿಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 127 ಹುದ್ದೆಗಳ ನೇಮಕಾತಿಗಾಗಿ (UPSC Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಸೈಂಟಿಸ್ಟ್-ಬಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆ ಹೆಸರು: ಸೈಂಟಿಸ್ಟ್-ಬಿ ಇತ್ಯಾದಿ
ಒಟ್ಟು ಹುದ್ದೆ: 127
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 22
ಜಿಯಾಲಜಿಸ್ಟ್, ಸೈಂಟಿಸ್ಟ್ ಬಿ, ಕೆಮಿಸ್ಟ್, ಅಸಿಸ್ಟಂಟ್ ಕೆಮಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ.ಇ, ಎಂ.ಟೆಕ್, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
ಒಬಿಸಿ, ಇಡಬ್ಲ್ಯೂಎಸ್ ಸಮುದಾಯದವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ upsc.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು



















