ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ (MECL Recruitment 2026) ಖಾಲಿ ಇರುವ 122 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಖನಿಜ ಅನ್ವೇಷಣಾ ನಿಗಮ ನಿಯಮಿತ
ಹುದ್ದೆ ಹೆಸರು: ಅಕೌಂಟಂಟ್ ಇತ್ಯಾದಿ
ಒಟ್ಟು ಹುದ್ದೆ: 122
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 11
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಟೆಕ್ನಿಶಿಯನ್, ಅಕೌಂಟಂಟ್, ಮೆಷಿನಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 55,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ mecl.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು



















