ಬೆಂಗಳೂರು : ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಜಾಮೀನು ಅರ್ಜಿ ವಜಾಗೊಂಡಿದೆ. ಈ ಮೂಲಕ ಆರೋಪಿ ಶಿವಶಂಕರಪ್ಪ ಸಾಹುಕಾರ್‌ಗೆ ಬಂಧನ (arrest) ಭೀತಿ ಎದುರಾಗಿದೆ.
ಶಿವಶಂಕಂರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಸೆಪ್ಟೆಂಬರ್ 07) ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆ ನಡೆಸುವ ವೇಳೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ನೀಟ್ ಪರೀಕ್ಷೆ ಅಕ್ರಮದಿಂದ ಕೆಲ ವಿದ್ಯಾರ್ಥಿಗಳೇ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳಿಂದಾಗಿಯೇ ಇತ್ತೀಚೆಗೆ ಭಾರೀ ಪ್ರತಿಭಟನೆ ನಡೆದಿದೆ. ಹೀಗಾದರೆ ರಾತ್ರಿ ಹಗಲು ಓದಿದವರ ಕಥೆ ಏನಾಗಬೇಕು? ಕೆಪಿಎಸ್‌ಸಿ ಮೇಲಿನ ಜನರ ವಿಶ್ವಾಸವೇ ನಾಶವಾಗಿದೆ. ನಿಮ್ಮ ಕುಟುಂಬದ ಸದಸ್ಯರೇ ಇದರಲ್ಲಿ ಭಾಗಿಯಾಗಿದ್ದಾರೆ. ಇದು ವ್ಯವಸ್ಥಿತ ಫ್ರಾಡ್ ಎಂದು ತರಾಟೆಗೆ ತೆಗೆದುಕೊಂಡು ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
ಇದನ್ನೂ ಓದಿ : ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ



















