ಬೆಂಗಳೂರು : ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆರಿಯರ್ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 2,482 ಹುದ್ದೆಗಳ (Bank Of Baroda Recruitment 2026) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅದರಲ್ಲೂ, ಅರ್ಜಿ ಸಲ್ಲಿಕೆಯ ದಿನಾಂಕವನ್ನು ಈಗ ಸೆಪ್ಟೆಂಬರ್ 7ರ ಬದಲಿಗೆ ಸೆಪ್ಟೆಂಬರ್ 17ರವರೆಗೆ ವಿಸ್ತರಣೆ ಮಾಡಲಾಗಿದೆ. ಅರ್ಜಿ ಸಲ್ಲಿಸದವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 2,482
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 17
ಉದ್ಯೋಗದ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿಯೇ 418 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 85,920 ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಕನಿಷ್ಠ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 175 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಜನರಲ್, ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು bankofbaroda.bank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಟೆಸ್ಟ್, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : 64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್!


















