ಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ (KFD Recruitment 2026) ಅಧಿಸೂಚನೆ ಹೊರಡಿಸಲಾಗಿದೆ.
750 ಫಾರೆಸ್ಟ್ ಅಬ್ಸರ್ವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದುವರೆಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನಾಂಕವಾಗಿತ್ತು. ಈಗ ಅವಧಿಯನ್ನು ಸೆಪ್ಟೆಂಬರ್ 30ಕ್ಕೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ 2ನೇ ಬಾರಿ ದಿನಾಂಕ ವಿಸ್ತರಣೆ ಆದಂತೆ ಆಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಫಾರೆಸ್ಟ್ ಅಬ್ಸರ್ವರ್
ಒಟ್ಟು ಹುದ್ದೆ: 750
ಉದ್ಯೋಗ ಸ್ಥಳ: ಕರ್ನಾಟಕದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30
ಮೈಸೂರಿನಲ್ಲಿ 120, ಕೊಡಗಿನಲ್ಲಿ 32, ಶಿವಮೊಗ್ಗದಲ್ಲಿ 38, ಚಾಮರಾಜನಗರದಲ್ಲಿ 169, ಕಲಬುರಗಿ 4, ಬೆಂಗಳೂರು 70 ಸೇರಿ ಹಲವೆಡೆ ಒಟ್ಟು 750 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 18ರಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವವರಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುವುದಿಲ್ಲ. ಎಸ್ಸೆಸ್ಸೆಲ್ಸಿ ಅಂಕಗಳು, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ aranya.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!



















