ಬೆಂಗಳೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಬೆಸ್ಕಾಂ ವಿಶೇಷ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹಬ್ಬದ ವೇಳೆ ವಿದ್ಯುತ್ ಅವಘಡಗಳನ್ನು ತಡೆಯಲು ಮಂಟಪಗಳ ವಿದ್ಯುತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತದೆ.
ವಿದ್ಯುತ್ ಸಂಪರ್ಕ ಪಡೆಯಲು ಮೊದಲು ಎನ್‌ಒಸಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಬಳಿಕ ಬೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲಿದ್ದು, ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಂದಲೂ ಸ್ಥಳ ತಪಾಸಣೆ ನಡೆಯಲಿದೆ.
ಗೌರಿ ಗಣೇಶ ಮಂಟಪಗಳಿಗೆ ಜಿಬಿಎ ಹಾಗೂ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರಗಳ ಅನುಮತಿ ಕಡ್ಡಾಯವಾಗಿದೆ. ಅಗತ್ಯ ಅನುಮತಿ ಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಮಂಟಪಗಳ ವಿದ್ಯುತ್ ವ್ಯವಸ್ಥೆಯ ಸಮರ್ಪಕತೆ ಮತ್ತು ಸುರಕ್ಷತೆಯ ಕುರಿತು ವರದಿ ಕಡ್ಡಾಯವಾಗಿದ್ದು, ಹಬ್ಬದ ಸಂದರ್ಭದಲ್ಲಿ ಯಾವುದೇ ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್



















