ಬೆಂಗಳೂರು : ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎನ್ನುವವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿಯು 560 ಹುದ್ದೆಗಳ ನೇಮಕಾತಿಗಾಗಿ (RRB Recruitment 2026) ಅಧಿಸೂಚನೆ ಹೊರಡಿಸಿದೆ. 560 ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೂಡಲೇ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ ಹೆಸರು : ರೈಲ್ವೆ ನೇಮಕಾತಿ ಮಂಡಳಿ ( RRB )
ಒಟ್ಟು ಹುದ್ದೆಗಳ ಸಂಖ್ಯೆ: 560
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಪ್ಯಾರಾ ಮೆಡಿಕಲ್ ಸ್ಟಾಫ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 14
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೆಪ್ಟೆಂಬರ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ನೇಮಕಾತಿ ಹೊಂದಿದವರಗೆ 7 ಪೇ ಸ್ಕೇಲ್ ಅನ್ವಯ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ rrbcdg.gov.in ಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ rrbcdg.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!



















