ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಲಸಿಗರ ದರ್ಪ ಮುಂದುವರೆದಿದ್ದು, ಪೌರಕಾರ್ಮಿಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆ ಬದಿಯಲ್ಲಿ ಕಸ ಎಸೆಯಬೇಡಿ, ಟೀ ಕುಡಿದ ಕಪ್ ಅನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಿದ್ದಕ್ಕೆ ಯುವತಿ ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾಳೆ.
ಪಟ್ಟಂದೂರು ಅಗ್ರಹಾರ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಗೆಳೆಯನ ಜೊತೆ ರಸ್ತೆ ಬದಿಯಲ್ಲಿ ಟೀ ಕುಡಿಯುತ್ತಿದ್ದ ಯುವತಿ ಟೀ ಕಪ್ ಅನ್ನು ರಸ್ತೆ ಬದಿಗೆ ಎಸೆದಿದ್ದಾಳೆ ಎನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಪೌರಕಾರ್ಮಿಕ ಕಪ್ ಅನ್ನು ಕಸದ ಬುಟ್ಟಿಗೆ ಹಾಕುವಂತೆ ಸೂಚಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಪೌರಕಾರ್ಮಿಕ ನೀಡಿದ ದೂರಿನ ಮೇರೆಗೆ ಯುವಕ-ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!


















