ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ತಮಿಳುನಾಡು ನ್ಯೂಸ್ ಪ್ರಿಂಟ್ ಆ್ಯಂಡ್ ಪೇಪರ್ಸ್ ಲಿಮಿಟೆಡ್ (TNPL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ತಮಿಳುನಾಡು ನ್ಯೂಸ್ ಪ್ರಿಂಟ್ ಆ್ಯಂಡ್ ಪೇಪರ್ಸ್ ಲಿಮಿಟೆಡ್ (TNPL)
ಹುದ್ದೆಗಳು: 5
ಹುದ್ದೆ ಹೆಸರು: ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 23
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಕರ್ನಾಟಕದ ಬೆಂಗಳೂರು, ಕೇರಳದ ಎರ್ನಾಕುಲಂ, ಮಹಾರಾಷ್ಟ್ರದ ಮುಂಬೈ, ಗುಜರಾತ್ ನ ಅಹ್ಮದಾಬಾದ್ ಹಾಗೂ ತಮಿಳುನಾಡಿನ ಚೆನ್ನೈನಲ್ಲಿ ತಲಾ 1 ಹುದ್ದೆ ಖಾಲಿ ಇದೆ. ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಎಂಬಿಎ, ಪಿ.ಜಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.46 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ tnpl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡು ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Chief General Manager (HR), Tamil Nadu Newsprint and Papers Limited (TNPL), No. 67, Anna Salai, Guindy, Chennai – 600 032, Tamil Nadu.
ಇದನ್ನೂ ಓದಿ ; ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್ ವಶಕ್ಕೆ!



















