ಬೆಂಗಳೂರು : ವಿಜಯಪುರದಲ್ಲಿರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sainik School Bijapur Recruitment 2026) ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ಹಾಗೂ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೈನಿಕ ಶಾಲೆ ಬಿಜಾಪುರ
ಒಟ್ಟು ಹುದ್ದೆಗಳು: 17
ಹುದ್ದೆ ಹೆಸರು: ಶಿಕ್ಷಕರು
ಉದ್ಯೋಗ ಸ್ಥಳ: ವಿಜಯಪುರ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 25
ಪೋಸ್ಟ್ ಗ್ರಾಜ್ಯುಯೇಟ್ ಟೀಚರ್ ಹಾಗೂ ಟ್ರೇನ್ಡ್ ಗ್ರಾಜ್ಯುಯೇಟ್ ಟೀಚರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿ.ಎಡ್, ಎಂ.ಎಡ್, ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18-50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 47 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸೈನಿಕ ಶಾಲೆಯ ಅಧಿಕೃತ ವೆಬ್ ಸೈಟ್ ssbj.inಗೆ ಭೇಟಿ ನೀಡಬೇಕು
Sainik School Bijapur ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಬೇಕು.
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರಾಂಶುಪಾಲರು,
ಸೈನಿಕ ಶಾಲೆ ವಿಜಯಪುರ
586108
ಇದನ್ನೂ ಓದಿ ; ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!



















