ಬೆಂಗಳೂರು : ನೀವೇನಾದರೂ ಮೈಸೂರು ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ (Mysore City Corporation Recruitment 2026) ಖಾಲಿ ಇರುವ 116 ಯುಜಿಡಿ ಹೆಲ್ಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಮೈಸೂರು ಮಹಾನಗರ ಪಾಲಿಕೆ
ಒಟ್ಟು ಹುದ್ದೆಗಳು: 116
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 9
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷಗಳಿಂದ 55 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಬರುವವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಮೊದಲಿಗೆ mysurucity.mrc.gov.inವೆಬ್ ಸೈಟ್ ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Mysore Municipal Corporation Headquarters, Sayajirao Road, Mysore – 570004.
ಇದನ್ನೂ ಓದಿ : ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ


















