ಬೆಂಗಳೂರು : ನೀವೇನಾದರೂ ಡಿಗ್ರಿ, ಮಾಸ್ಟರ್ ಕೋರ್ಸ್ ಮುಗಿಸಿ ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೊಪ್ಪಳದಲ್ಲಿರುವ ಕೃಷಿ ಇಲಾಖೆಯಲ್ಲಿ (Koppal Agriculture Department Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 7 ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೊಪ್ಪಳ ಕೃಷಿ ಇಲಾಖೆ
ಹುದ್ದೆ ಹೆಸರು: ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 7
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 19
3 ತಾಲೂಕು ಟೆಕ್ನಿಕಲ್ ಮ್ಯಾನೇಜರ್ ಹಾಗೂ 4 ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು koppal.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ



















