ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

September 19, 2026
Share on WhatsappShare on FacebookShare on Twitter

ಮುಂಬೈ : ಮುಂಬೈನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಕ್ಯಾಂಪಸ್‌ನಲ್ಲಿ ಪರೀಕ್ಷೆಯ ವೇಳೆ ಮೊಬೈಲ್ ಬಳಸಿ ನಕಲು ಮಾಡುತ್ತಿದ್ದಾಗ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಸಿಕ್ಕಿಬಿದ್ದಿದ್ದು, ಇದರಿಂದ ನೊಂದ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದ್ದು, ಇದರ ಬೆನ್ನಲ್ಲೇ ಕ್ಯಾಂಪಸ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಆರಂಭಿಸಿದ್ದಾರೆ.

ಆಗಿದ್ದೇನು?

ಮೃತ ವಿದ್ಯಾರ್ಥಿಯನ್ನು ಎನರ್ಜಿ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ವಾಕೋಡೆ ಎಂದು ಗುರುತಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಸಾಹಿಲ್, ಪ್ರಶ್ನೆಪತ್ರಿಕೆಯನ್ನು ಚಾಟ್‌ಜಿಪಿಟಿ (ChatGPT) ಆ್ಯಪ್‌ಗೆ ಅಪ್‌ಲೋಡ್ ಮಾಡಿ ಉತ್ತರಗಳನ್ನು ಹುಡುಕಲು ಯತ್ನಿಸುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದಿದ್ದ ಎಂದು ಸಂಸ್ಥೆ ತಿಳಿಸಿದೆ.

ಸಂಸ್ಥೆಯ ಸ್ಪಷ್ಟನೆಯೇನು?

ಘಟನೆ ಕುರಿತು ಪ್ರತಿಕ್ರಿಯಿಸಿರುವ ಐಐಟಿ ಬಾಂಬೆ, ವಿದ್ಯಾರ್ಥಿಯ ವಿರುದ್ಧ ತಕ್ಷಣವೇ ಯಾವುದೇ ಶಿಸ್ತುಕ್ರಮ ಕೈಗೊಂಡಿರಲಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಸ್ ಬೋಧಕರು ಹಾಗೂ ವಿಭಾಗೀಯ ಮುಖ್ಯಸ್ಥರು (HoD) ವಿದ್ಯಾರ್ಥಿಯೊಂದಿಗೆ ಮಾತುಕತೆ ನಡೆಸಿ ಕೌನ್ಸೆಲಿಂಗ್ ನೀಡಿದ್ದರು. ಈ ಘಟನೆಯಿಂದ ಆತನ ಶೈಕ್ಷಣಿಕ ಭವಿಷ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರದಂತೆ ಭರವಸೆ ನೀಡಲಾಗಿತ್ತು ಎಂದು ಸಂಸ್ಥೆ ಹೇಳಿದೆ. ಈ ಸುದೀರ್ಘ ಸಂಭಾಷಣೆಯ ನಂತರ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೊಠಡಿಗೆ ಮರಳಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಆತ ತನ್ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ವಿದ್ಯಾರ್ಥಿಗಳ ಆಕ್ರೋಶ

ವಿದ್ಯಾರ್ಥಿಯ ಸಾವಿನ ಸುದ್ದಿ ಹರಡುತ್ತಿದ್ದಂತೆ ಪೊವಾಯ್ ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ನೂರಾರು ವಿದ್ಯಾರ್ಥಿಗಳು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆಗಿಳಿದಿದ್ದಾರೆ. ಸಂಸ್ಥೆಯು ಸತ್ಯ ಸಂಗತಿಯನ್ನು ಮರೆಮಾಚುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ನಕಲು ಆರೋಪದ ಮೇಲೆ ವಿದ್ಯಾರ್ಥಿಗೆ ಒಂದು ವರ್ಷದ ಅಮಾನತು ಶಿಕ್ಷೆಯ ಹೆದರಿಕೆ ಹಾಕಲಾಗಿತ್ತು ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದ್ದಾರೆ. ಅಮಾನತಾದರೆ ಹಾಸ್ಟೆಲ್ ಖಾಲಿ ಮಾಡಿ ಹೊರಗೆ ಇರಬೇಕಾಗುತ್ತದೆ ಮತ್ತು ಇಂಜಿನಿಯರಿಂಗ್ ಪೂರ್ಣಗೊಳಿಸಲು ನಾಲ್ಕು ವರ್ಷಗಳ ಬದಲಾಗಿ ಐದು ಅಥವಾ ಅದಕ್ಕಿಂತ ಹೆಚ್ಚು ವರ್ಷ ತಗುಲುತ್ತದೆ ಎಂಬ ಭೀತಿಯಲ್ಲಿದ್ದ ಸಾಹಿಲ್, ಈ ಒತ್ತಡ ತಾಳಲಾರದೆ ಪ್ರಾಣವನ್ನೇ ಕಳೆದುಕೊಳ್ಳುವ ನಿರ್ಧಾರ ಕೈಗೊಂಡಿರಬಹುದು ಎಂದು ಸಹಪಾಠಿಗಳು ಶಂಕಿಸಿದ್ದಾರೆ. ಈ ದುರಂತದ ಪೂರ್ಣ ಹೊಣೆಯನ್ನು ಆಡಳಿತ ಮಂಡಳಿಯೇ ಹೊರಬೇಕು ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆರು ತಿಂಗಳಲ್ಲಿ ಮೂರನೇ ಸರಣಿ ಸಾವು

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಭವಿಸಿದ ಮೂರನೇ ಆತ್ಮಹತ್ಯೆ ಘಟನೆ ಇದಾಗಿದೆ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಜುಲೈನಲ್ಲಿ ಹೊಸ ಸೆಮಿಸ್ಟರ್ ಆರಂಭದ ವೇಳೆಯೂ ಬಿ.ಟೆಕ್ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿದ್ದ. ಪ್ರಸಕ್ತ ಸಾಲಿನಲ್ಲಿ ಸಾಲು ಸಾಲು ಆತ್ಮಹತ್ಯೆಗಳು ವರದಿಯಾಗುತ್ತಿರುವುದು ಕ್ಯಾಂಪಸ್‌ನಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಕ್ಯಾಂಪಸ್‌ನಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ದತ್ತಾತ್ರೇಯ ನಲವಡೆ ಮಾತನಾಡಿ, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಐಐಟಿ ಆಡಳಿತ ಮಂಡಳಿಯ ನಡುವೆ ಶಾಂತಿಯುತ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಐಐಟಿ ಬಾಂಬೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಯ ಸಾವು ತೀವ್ರ ದುಃಖ ತಂದಿದೆ ಎಂದು ಕಂಬನಿ ಮಿಡಿದಿದೆ.

ಇದನ್ನೂ ಓದಿ : ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Tags: Academic MisconductArtificial IntelligenceCampus ProtestChatGPT CheatingEducation NewsExam CheatingIIT BombayIIT Bombay ProtestKNBNews beatStudent DeathStudent Suicide
SendShareTweet
Previous Post

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Next Post

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

Related Posts

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Next Post
ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat