ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL Recruitment 2026) ಕಂಪನಿಯಲ್ಲಿ 14 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 14 ಅಸೋಸಿಯೇಟ್ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)
ಖಾಲಿ ಹುದ್ದೆಗಳ ಸಂಖ್ಯೆ: 14
ಹುದ್ದೆಯ ಸ್ಥಳ: ನವದೆಹಲಿ
ಹುದ್ದೆಯ ಹೆಸರು: ಅಸೋಸಿಯೇಟ್ ಎಂಜಿನಿಯರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 29
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 41 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವ ಯಾವುದೇ ಸಮುದಾಯದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://engineersindia.com/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 96 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್ಗೆ ಆತಂಕ



















