ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 6 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 6
ಹುದ್ದೆ ಹೆಸರು: ಸೀನಿಯರ್ ಡೆಪ್ಯೂಟಿ ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 6
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ
ಕರ್ನಾಟಕದ ಉತ್ತರ ಕನ್ನಡ, ಮಹಾರಾಷ್ಟ್ರದ ಮುಂಬೈ, ಆಂಧ್ರಪ್ರದೇಶದ ವಿಶಾಖಪಟ್ಟಣಂ ಹಾಗೂ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 52 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 2.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಯುವರಾಜ್ ಸಿಂಗ್ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ


















