ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕಲಬುರಗಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (DHFWO Kalaburagi Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಉಡುಪಿ
ಹುದ್ದೆಗಳ ಹೆಸರು: ಕ್ಲಿನಿಕಲ್ ಸೈಕಾಲಜಿಸ್ಟ್ ಇತ್ಯಾದಿ
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 27
1 ಕ್ಲಿನಿಕಲ್ ಸೈಕಾಲಜಿಸ್ಟ್, 1 ಆಪ್ಟೊಮೆಟ್ರಿಸ್ಟ್ ಹಾಗೂ 1 ಸ್ಪೀಚ್ ಥೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕಲಬುರಗಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಆಯಾ ಹುದ್ದೆಗಳಿಗೆ ಅನುಗುಣವಾಗಿ 25 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ kalaburagi.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!



















