ಬೆಂಗಳೂರು : ಕೊಪ್ಪಳ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದೆ. ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Koppal Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ
ಹುದ್ದೆಯ ಹೆಸರು: ಮೆಡಿಕಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳ ಸಂಖ್ಯೆ: 5
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 25
ನ್ಯೂರಾಲಜಿಸ್ಟ್, ಫಿಸಿಜಿಶಿಯನ್, ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್, ಎಂಡಿ, ಡಿಎಂ, ಎಂ.ಫಿಲ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.5 ರೂಪಾಯಿ ವೇತನ ನೀಡಲಾಗುತ್ತದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ koppal.nic.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!



















