ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 18
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 14
3 ಗ್ರಾಜ್ಯುಯೇಟ್ ಅಪ್ರೆಂಟಿಸ್ ಹಾಗೂ 9 ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ಸೆಸ್ಸೆಲ್ಸಿ, ಐಟಿಐ ಹಾಗೂ ಡಿಪ್ಲೋಮಾ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 13,200 ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 18 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ : 20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!


















