ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIAP Recruitment 2026) ಹೊರಡಿಸಲಾಗಿದೆ. 2 ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 02
ನೇಮಕಾತಿ ವಿಧಾನ: ನೇರ ಸಂದರ್ಸನ
ಸಂದರ್ಶನದ ದಿನಾಂಕ: ಅಕ್ಟೋಬರ್ 6
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಬಯಸುವವರು iiap.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಕಚೆರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ದಿನಾಂಕ
Institute Campus, 2nd Block, Koramangala, Sarjapur Road, Bangalore – 560 034.
ಇದನ್ನೂ ಓದಿ : ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್ನ ಸೊಹಾರ್ ಬಂದರು?


















