ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

September 23, 2026
Share on WhatsappShare on FacebookShare on Twitter

ಬೆಂಗಳೂರು : ಟಿ.ನರಸೀಪುರದಲ್ಲಿ ಗಣೇಶೋತ್ಸವದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ದಲಿತರ ಬಗ್ಗೆ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಅರ್ಜುನ್ ಗೋಪಾಲಯ್ಯ ಅವರು ಬಹಿರಂಗ ಪತ್ರ ಬಿಡುಗಡೆ ಮಾಡಿ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಅವರ ವಿಚಾರಗಳನ್ನು ರಾಜಕೀಯ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಂಡು ಬಳಸಬಾರದು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂಪೂರ್ಣ ಸಾಹಿತ್ಯ ಮತ್ತು ವಿಚಾರಗಳನ್ನು ಓದಿ ಚರ್ಚಿಸಬೇಕು. ಪ್ರತಾಪ್ ಸಿಂಹ ಅವರು ಆಪಾದಿತ ಹೇಳಿಕೆಗಳನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಂಬೇಡ್ಕರ್ ಅವರು 1940ರಲ್ಲಿ ರಚಿಸಿ 1941ರಲ್ಲಿ ಪ್ರಕಟಿಸಿದ ‘ಥಾಟ್ಸ್ ಆನ್ ಪಾಕಿಸ್ತಾನ್’ ಕೃತಿಯನ್ನು ಕೆಲವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸುತ್ತಿದ್ದಾರೆ ಎಂದು ಆರೋಪಿಸಿರುವ ಗೋಪಾಲಯ್ಯ, ಅದೇ ಅಂಬೇಡ್ಕರ್ ಅವರ ‘ರಿಡಲ್ಸ್ ಇನ್ ಹಿಂದೂಯಿಸಂ’ ಕೃತಿಯ ಬಗ್ಗೆಯೂ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ. ‘ಥಾಟ್ಸ್ ಆನ್ ಪಾಕಿಸ್ತಾನ್’ನಲ್ಲಿ ಭಾರತದ ವಿಭಜನೆ, ಪಾಕಿಸ್ತಾನದ ಬೇಡಿಕೆ, ಹಿಂದೂ-ಮುಸ್ಲಿಂ ಸಾಮಾಜಿಕ ಅಂತರ, ಜನಸಂಖ್ಯೆ ವಿನಿಮಯ ಹಾಗೂ ಅಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಅಂಬೇಡ್ಕರ್ ಚರ್ಚಿಸಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿಭಜನೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ವ್ಯವಸ್ಥಿತ ಜನಸಂಖ್ಯೆ ವಿನಿಮಯದ ಅಗತ್ಯವಿದೆ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದರು ಎಂದು ಗೋಪಾಲಯ್ಯ ತಿಳಿಸಿದ್ದಾರೆ.

ಇದರ ಜೊತೆಗೆ ‘ರಿಡಲ್ಸ್ ಇನ್ ಹಿಂದೂಯಿಸಂ’ ಕೃತಿಯಲ್ಲಿರುವ ಅಂಬೇಡ್ಕರ್ ಅವರ ವಿಚಾರಗಳನ್ನೂ ಸಾರ್ವಜನಿಕವಾಗಿ ಚರ್ಚಿಸಬೇಕು ಎಂದು ಅವರು ಹೇಳಿದ್ದಾರೆ. ಹಿಂದೂ ಧರ್ಮದ ಒಳಗಿನ ಅಸಮಾನತೆ, ಜಾತಿ ವ್ಯವಸ್ಥೆ, ದೇವರುಗಳ ಕುರಿತ ಪರಿಕಲ್ಪನೆ, ರಾಮನ ಪಾತ್ರ, ಕೃಷ್ಣನ ಪಾತ್ರ, ಬ್ರಹ್ಮ ಮತ್ತು ವರ್ಣವ್ಯವಸ್ಥೆ, ವೇದಗಳ ಸ್ವರೂಪ ಹಾಗೂ ಭಗವದ್ಗೀತೆಯ ಕುರಿತು ಅಂಬೇಡ್ಕರ್ ಎತ್ತಿರುವ ಪ್ರಶ್ನೆಗಳನ್ನು ಗೋಪಾಲಯ್ಯ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಹಿಂದೂ ಧರ್ಮ ಮತ್ತು ಬ್ರಾಹ್ಮಣ್ಯವನ್ನು ಪ್ರತ್ಯೇಕವಾಗಿ ಅರ್ಥಮಾಡಿಕೊಳ್ಳಬೇಕು ಎಂಬ ಅಂಬೇಡ್ಕರ್ ಅವರ ವಿಚಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಅಂಬೇಡ್ಕರ್ ಅವರ ಜಾತಿ ವ್ಯವಸ್ಥೆ ವಿರೋಧಿ ಹೋರಾಟವನ್ನೂ ಪತ್ರದಲ್ಲಿ ಪ್ರಸ್ತಾಪಿಸಿರುವ ಗೋಪಾಲಯ್ಯ, ‘ಅನೈಹಿಲೇಷನ್ ಆಫ್ ಕಾಸ್ಟ್’ ಕೃತಿಯಲ್ಲಿ ಜಾತಿ ವ್ಯವಸ್ಥೆಯ ಕುರಿತು ಅಂಬೇಡ್ಕರ್ ಮಾಡಿರುವ ವಿಶ್ಲೇಷಣೆ, ಮನುಸ್ಮೃತಿ ದಹನ ಹಾಗೂ 1956ರ ಅಕ್ಟೋಬರ್ 14ರಂದು ಬೌದ್ಧ ಧರ್ಮ ಸ್ವೀಕರಿಸಿದ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಅಂಬೇಡ್ಕರ್ ಅವರ ವಿಚಾರಗಳನ್ನು ಒಂದು ಕೃತಿ ಅಥವಾ ಒಂದು ಹೇಳಿಕೆಗೆ ಸೀಮಿತಗೊಳಿಸಿ ನೋಡುವ ಬದಲು, ಅವರ ಸಂಪೂರ್ಣ ಚಿಂತನೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದೇ ಹಿನ್ನೆಲೆಯಲ್ಲಿ ಟಿ. ನರಸೀಪುರ ಗಣೇಶೋತ್ಸವದ ವೇಳೆ ಪ್ರತಾಪ್ ಸಿಂಹ ಅವರು ದಲಿತರ ಬಗ್ಗೆ ನೀಡಿರುವ ಹೇಳಿಕೆಯನ್ನು ಗೋಪಾಲಯ್ಯ ಪ್ರಶ್ನಿಸಿದ್ದಾರೆ. ‘ದಲಿತರು ಅಂಬೇಡ್ಕರ್ ಅವರನ್ನು ಓದಿಲ್ಲ’ ಹಾಗೂ ‘ನೀಲಿ ಶಾಲು ಹಾಕಿಕೊಂಡು ಎಲ್ಲೆಡೆ ಬಂದು ಅಡ್ಡಿಪಡಿಸುತ್ತಾರೆ’ ಎಂಬರ್ಥದಲ್ಲಿ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆಂದು ಅವರು ಆರೋಪಿಸಿದ್ದಾರೆ. ಇಂತಹ ಹೇಳಿಕೆ ದಲಿತ ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿರುವ ಗೋಪಾಲಯ್ಯ, ಗಣೇಶೋತ್ಸವ ಯಾರೊಬ್ಬರ ವೈಯಕ್ತಿಕ ಹಕ್ಕು ಅಥವಾ ಗುತ್ತಿಗೆಯಲ್ಲ. ರಾಜ್ಯದ ಹಲವು ದಲಿತ ಕೇರಿಗಳಲ್ಲೂ ಗಣೇಶೋತ್ಸವ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಅಂಬೇಡ್ಕರ್ ಅವರ ಒಂದು ಕೃತಿಯನ್ನು ಮಾತ್ರ ಮುಂದಿಟ್ಟುಕೊಂಡು ಅವರ ವಿಚಾರಗಳನ್ನು ಅರ್ಥೈಸುವುದು ಸರಿಯಲ್ಲ ಎಂದು ಹೇಳಿರುವ ಅರ್ಜುನ್ ಗೋಪಾಲಯ್ಯ, ‘ಥಾಟ್ಸ್ ಆನ್ ಪಾಕಿಸ್ತಾನ್’ ಅನ್ನು ಉಲ್ಲೇಖಿಸುವವರು ‘ರಿಡಲ್ಸ್ ಇನ್ ಹಿಂದೂಯಿಸಂ’ ಸೇರಿದಂತೆ ಅವರ ಇತರ ಕೃತಿಗಳನ್ನೂ ಓದಿ ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ. ಒಂದನ್ನು ಎತ್ತಿಹಿಡಿದು ಮತ್ತೊಂದನ್ನು ಮರೆಮಾಚುವುದು ಬೌದ್ಧಿಕ ಪ್ರಾಮಾಣಿಕತೆಯಲ್ಲ ಎಂಬುದು ಅವರ ವಾದವಾಗಿದೆ. ಇದೇ ವೇಳೆ ಸಂಸತ್ ಭವನದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರ ಅತಿಥಿ ಪಾಸ್ ಬಳಕೆಯಾಗಿತ್ತು ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದ್ದ ವಿಚಾರವನ್ನೂ ಅವರು ಪ್ರಸ್ತಾಪಿಸಿ, ಈ ಬಗ್ಗೆ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಾವು ಸಂವಿಧಾನವನ್ನು ನಂಬಿದವರು. ಮುಸ್ಲಿಮರಿಗೆ ಕುರಾನ್, ಕ್ರಿಶ್ಚಿಯನ್ನರಿಗೆ ಬೈಬಲ್, ಹಿಂದೂಗಳಿಗೆ ಗೀತೆ, ವೇದ, ಪುರಾಣಗಳು ಇರಬಹುದು. ಆದರೆ ಪ್ರಜೆಗಳಾಗಿ ಸಂವಿಧಾನವೇ ಪರಮಶ್ರೇಷ್ಠ ಗ್ರಂಥ. ಧರ್ಮದ ಹೆಸರಿನಲ್ಲಿ ಕೋಮು ಭಾವನೆಗಳನ್ನು ಕೆರಳಿಸುವುದು ಧರ್ಮವಲ್ಲ. ಹೀಗಾಗಿ ಪ್ರತಾಪ್ ಸಿಂಹ ಅವರು ಆಪಾದಿತ ಹೇಳಿಕೆಗಳನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹಿಸಿದೆ. ಬೇಡಿಕೆ ಈಡೇರದಿದ್ದರೆ ಪ್ರಜಾಸತ್ತಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ಮುಂದುವರಿಸುವುದಾಗಿ ಅರ್ಜುನ್ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Tags: Apology DemandArjun GopalayaBJP KarnatakaKarnataka Newskarnataka politicsLatest Political NewsMysuru PoliticsNews beatPolitical controversyPolitical DisputePratap Simha
SendShareTweet
Previous Post

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Next Post

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು
ರಾಜಕೀಯ

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

Next Post
ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat