ಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಸಿದ್ಧತೆ ನಡೆಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸಮಾಚಾರ ದೊರೆತಿದೆ. 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ (Karnataka Prisons Department Recruitment 2026) ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ
ಒಟ್ಟು ಹುದ್ದೆಗಳು: 869
ಹುದ್ದೆಗಳ ಹೆಸರು: ಜೈಲರ್, ವಾರ್ಡರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 15
5 ಜೈಲರ್, 275 ಪ್ರಿಸನ್ ಗಾರ್ಡ್, 24 ಇನ್ ಸ್ಟ್ರಕ್ಟರ್ ಗ್ರೇಡ್-2, 5 ವಾರ್ಡರ್ ಕಮ್ ನರ್ಸಿಂಗ್ ಹಾಗೂ 560 ವಾರ್ಡರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 33 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿಯವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಶಾರ್ಟ್ ಲಿಸ್ಟಿಂಗ್, ದೈಹಿಕ ಸಾಮರ್ಥ್ಯ ಪರೀಕ್ಷೆ, ಎಂಡುರೆನ್ಸ್ ಟೆಸ್ಟ್ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.12 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು cetonline.karnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್‌ಗೆ ಯತ್ನ? ಮಾಜಿ CSK ಆಟಗಾರ ದೂರು ; ಬಿಸಿಸಿಐಗೆ ಮಾಹಿತಿ!


















