ಬೆಂಗಳೂರು : ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಚೇರಿಗಳನ್ನು ಹೊಂದಿರುವ, ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ (NBT India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 17 ಎಡಿಟೋರಿಯಲ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ
ಒಟ್ಟು ಹುದ್ದೆಗಳು: 17
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಎಡಿಟೋರಿಯಲ್ ಅಸಿಸ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30
ಕರ್ನಾಟಕದ ಬೆಂಗಳೂರು ದೇಶದ ಹಲವೆಡೆ ಇರುವ ಕಚೇರಿಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://www.nbtindia.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ : IPL ಬಿಡ್ಡಿಂಗ್ಗೆ ಗೋವಾ ವೇದಿಕೆ ; ಡಿಸೆಂಬರ್ನಲ್ಲಿ ಮಿನಿ ಹರಾಜು!


















