ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ, ಇದೀಗ ಅವರ ಅಭಿಮಾನಿಗಳು ರಾಷ್ಟ್ರಪತಿಗಳ ಮೊರೆ ಹೋಗಿದ್ದಾರೆ. ದರ್ಶನ್ ಅವರನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ಬಿಡುಗಡೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿ ಅಭಿಮಾನಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ದರ್ಶನ್ ಅಭಿಮಾನಿಗಳು ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದ್ದು, ನಟನ ಪರಿಸ್ಥಿತಿಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ. ಪತ್ರದ ಮೂಲಕ ದರ್ಶನ್ ಪರ ಅಭಿಮಾನಿಗಳು ತಮ್ಮ ಬೇಡಿಕೆಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲು ಪ್ರಯತ್ನಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಕಳೆದ ಎರಡು ವರ್ಷಗಳಿಂದ ಕಾನೂನು ಹಿನ್ನಡೆ ಮುಂದುವರಿದಿದೆ. ಜಾಮೀನು ಸಿಗದೆ ಜೈಲಿನಲ್ಲಿರುವ ನಟನ ಪರವಾಗಿ ಇದೀಗ ಅಭಿಮಾನಿಗಳೇ ರಾಷ್ಟ್ರಪತಿಗಳ ಮೊರೆ ಹೋಗಿರುವುದು ಚರ್ಚೆಗೆ ಕಾರಣವಾಗಿದೆ.
ಇಷ್ಟು ದಿನ ದರ್ಶನ್ ಪರವಾಗಿ ಕೋರ್ಟ್ಗಳಲ್ಲಿ ಕಾನೂನು ಹೋರಾಟ ನಡೆಯುತ್ತಿತ್ತು. ಇದೀಗ ಅಭಿಮಾನಿಗಳ ಪತ್ರದ ಮೂಲಕ ರಾಷ್ಟ್ರಪತಿಗಳ ಗಮನ ಸೆಳೆಯುವ ಪ್ರಯತ್ನ ನಡೆದಿದೆ. ದರ್ಶನ್ ಅವರನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಇಂದು ಪವಿತ್ರಾ ಗೌಡಗೆ ಬಿಗ್ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?



















