ಬೆಂಗಳೂರು : ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರಕಿದೆ. ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ (ITBP Recruitment 2026) ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹೆಡ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ (ITBP)
ಒಟ್ಟು ಹುದ್ದೆಗಳು: 21
ಹುದ್ದೆಗಳ ಹೆಸರು: ಹೆಡ್ ಕಾನ್ ಸ್ಟೆಬಲ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 27
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಪಾಸಾಗಿರಬೇಕು ಎಂದು ಅಧಿಸೂಚನೆ ತಿಳಿಸಿದೆ. 18 ವರ್ಷ ತುಂಬಿದವರು ಅರ್ಜಿ ಸಲ್ಲಿಸಬಹುದು. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಜನರಲ್, ಒಬಿಸಿ ಸಮುದಾಯದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 81 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ itbpolice.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು


















