ಬೆಂಗಳೂರು : ಮ್ಯಾನೇಜ್ ಮೆಂಟ್ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ದೊರೆತಿದೆ. ಬಜಾಜ್ ಫಿನ್ ಸರ್ವ್ ಸಂಸ್ಥೆಯು 2026-27ನೇ ಸಾಲಿನಲ್ಲಿ ಮ್ಯಾನೇಜ್ ಮೆಂಟ್ ಕೋರ್ಸ್ ಗಳನ್ನು (Bajaj Finserv Scholarship Program 2026-27) ಅಧ್ಯಯನ ಮಾಡುತ್ತಿರುವವರಿಗೆ ಗರಿಷ್ಠ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದೆ.
ಟಾಪ್ -25 ಎನ್ ಐ ಆರ್ ಎಫ್ ಶ್ರೇಯಾಂಕಿತ ಕಾಲೇಜುಗಳ ವಿದ್ಯಾರ್ಥಿಗಳನ್ನು ಈ ಸ್ಕಾಲರ್ಶಿಪ್ ಗೆ ಪರಿಗಣಿಸಲಾಗುತ್ತದೆ. ಟಾಪ್ -10 ಎನ್ ಐ ಆರ್ ಎಫ್ ಶ್ರೇಯಾಂಕಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಎಂಬಿಎ, ಪಿಜಿಡಿಎಂ, ಪಿಜಿಪಿ, ಬಿಇ, ಬಿಟೆಕ್, ಎಂಇ, ಎಂಇ, ಎಂಟೆಕ್ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು ಏನೇನು?
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಠ ಶೇ.75ರಷ್ಟು ಅಂಕಗಳನ್ನು ಪಡೆದಿರಬೇಕು. ಪೋಷಕರ ವಾರ್ಷಿಕ ಆದಾಯವು 15 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ವೃತ್ತಿಪರ ಕೋರ್ಸ್ ಗೆ ಪ್ರವೇಶ ಪಡೆದಿರುವ ಕುರಿತು ದಾಖಲಾತಿ, ಕುಟುಂಬದ ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್ ವಿವರ ಸೇರಿ ಹಲವು ದಾಖಲೆಗಳನ್ನು ಸಲ್ಲಿಸಬೇಕು
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://www.buddy4study.com/page/bajaj-finserv-scholarship-program ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೋಂದಣಿ ಮಾಡಿಕೊಂಡು ಅರ್ಜಿ ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ.
ಇದನ್ನೂ ಓದಿ : ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ


















