ಬೆಂಗಳೂರು : ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಜಾಲ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್ ರಂಜನ್ ಬಾಬುನನ್ನು ವಿಶೇಷ ತನಿಖಾಧಿಕಾರಿಗಳ ತಂಡ (SIT) ಕೊನೆಗೂ ಬಂಧಿಸಿದೆ.
ಮಾಹಿತಿಗಳ ಪ್ರಕಾರ, ಪ್ರಶಾಂತ್ ಅಜರ್‌ಬೈಜಾನ್‌ನಿಂದ ವಾಪಸಾದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಸೋಮವಾರ) ಇಂದು ಬೆಳಗ್ಗೆ ಬಂಧಿಸಲಾಗಿದೆ.
ಪ್ರಶಾಂತ್ ವಿರುದ್ಧ ಈಗಾಗಲೇ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣ ಬೆಳಕಿಗೆ ಬಂದ ಬಳಿಕ ಆತ ಅಜರ್‌ಬೈಜಾನ್‌ನಲ್ಲಿ ತಲೆಮರೆಸಿಕೊಂಡಿದ್ದ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿದ್ದವು. ವಿದೇಶದಿಂದ ವಾಪಸ್ ಬಂದ ಸಂದರ್ಭದಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಆತನನ್ನ ಬಂಧಿಸಿದ್ದಾರೆ.
ಪ್ರಶಾಂತ್ ರಂಜನ್ ಬಾಬು ಹಿನ್ನೆಲೆ :
ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದ ನಕಲಿ ಔಷಧ ಜಾಲದ ಪ್ರಮುಖ ಕಿಂಗ್‌ಪಿನ್ ಎಂದು ಪ್ರಶಾಂತ್ ರಂಜನ್ ಬಾಬುನನ್ನು ಎಸ್‌ಐಟಿ ಶಂಕಿಸಿದೆ. ಈ ಹಿಂದೆ ತನಿಖೆ ವೇಳೆ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿರುವುದು ಪತ್ತೆಯಾಗಿತ್ತು. ಸೆಪ್ಟೆಂಬರ್ 9ರಂದು ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳ ವಶದಲ್ಲಿದ್ದ. ಭಾರತ ಮತ್ತು ಅಜರ್‌ಬೈಜಾನ್ ನಡುವೆ ಅವರನ್ನು ನೇರವಾಗಿ ಹಸ್ತಾಂತರಿಸಿಕೊಳ್ಳುವ ವ್ಯವಸ್ಥೆ ಇಲ್ಲದ ಕಾರಣ, ಆತ ಭಾರತಕ್ಕೆ ಮರಳಿದ ಬಳಿಕ ಲುಕ್‌ಔಟ್ ನೋಟಿಸ್ ಆಧರಿಸಿ ಬಂಧಿಸಬೇಕಿತ್ತು.
ಇದೀಗ ಪ್ರಶಾಂತ್ ರಂಜನ್ ಬಾಬು ಬಂಧನವಾಗಿರುವ ಹಿನ್ನೆಲೆ ದೊಡ್ಡೇರಿ ಫಾರ್ಮ್‌ಹೌಸ್‌ನಿಂದ ಆರಂಭವಾದ ನಕಲಿ ಔಷಧ ಜಾಲದ ಕಾರ್ಯವೈಖರಿ, ಹಣಕಾಸು ವ್ಯವಹಾರ ಮತ್ತು ಇತರ ಆರೋಪಿಗಳ ಸಂಪರ್ಕದ ಕುರಿತು ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!



















