ಉಡುಪಿ : ಜಿಲ್ಲೆಯ ಕುಂದಾಪುರ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಅಮಾನತ್ ಕೋ ಆಪರೇಟಿವ್ ಸೊಸೈಟಿಯ ಸರ್ವ ಸದಸ್ಯರ 6ನೇ ವಾರ್ಷಿಕ ಮಹಾಸಭೆಯು ಇದೇ ಬರುವ ತಾರೀಕು 09:09:2026ರಂದು (ಬುಧವಾರ) ನಡೆಯಲಿದೆ.
2026ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಮಾವಿನಕಟ್ಟೆಯಲ್ಲಿರುವ ಸಮುದಾಯ ಭವನದಲ್ಲಿ ಸೆ.9ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷ ಎಸ್. ದಸ್ತಾಗಿರಿ ಕಂಡ್ಲುರು ಅವರು ವಹಿಸಲಿದ್ದು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಬೇಕೆಂದು ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ದೇವಾಡಿಗ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಫೋ.ನಂ. 08254-271286 ಅಥವಾ 7411341286ಗೆ ಸಂಪರ್ಕಿಸಲು ತಿಳಿಸಲಾಗಿದೆ.



















