ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಎಚ್ ಎಲ್ ಎಲ್ ಲೈಫ್ ಲಿಮಿಟೆಡ್ ಕಂಪನಿಯಲ್ಲಿ (HLL Lifecare Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಫಾರ್ಮಾಸಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಫಾರ್ಮಾಸಿಸ್ಟ್ ಇತ್ಯಾದಿ
ನೇರ ಸಂದರ್ಶನದ ದಿನಾಂಕ: ಅಕ್ಟೋಬರ್ 2
ಫಾರ್ಮಾಸಿಸ್ಟ್ ಹಾಗೂ ಅಸಿಸ್ಟಂಟ್ ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಲ್ಲಿ ಡಿ ಫಾರ್ಮ್ ಹಾಗೂ ಬಿ ಫಾರ್ಮ್ ಕೋರ್ಸ್ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ 37 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು 2ರಿಂದ 8 ವರ್ಷಗಳವರೆಗೆ ಕಾರ್ಯಾನುಭವ ಹೊಂದಿದ್ದರೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.comವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 9188401559
ಸಂದರ್ಶನ ನಡೆಯುವ ಸ್ಥಳ
AMRIT Pharmacy, Near OPD Premises, NIMHANS Hospital, Bengaluru – 29.
ಇಸನ್ನೂ ಓದಿ ;2027ರ ವಿಶ್ವಕಪ್ ಬಳಿಕ ಕೊಹ್ಲಿ ನಿವೃತ್ತಿ? ಅಶ್ವಿನ್ ಹೇಳಿದ್ದೇನು?



















